ಹೂಡೆ: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಉಡುಪಿ: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ತಗುಲಿ ಸುಟ್ಟಹೋದ ಘಟನೆ ಉಡುಪಿಯ ಹೂಡೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. ಅಗ್ನಿಶಾಮಕ ಇಲಾಖೆಯ ಕ್ಷಿಪ್ರ ಕಾರ್ಯಾಚರಣೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಈ ದುರ್ಘಟನೆ ಸಂಭವಿಸಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಕದಲ್ಲೆ ವಸತಿ, ಹೊಟೇಲ್, ಕೆಫೆಯಿದ್ದು ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೂಕ್ತ […]