ಬೈಕ್-ಲಾರಿ ಮಧ್ಯೆ ಭೀಕರ ಅಪಘಾತ: ಪೆರಂಪಳ್ಳಿಯ ಯುವಕ ಮೃತ್ಯು

ಉಡುಪಿ: ಬೈಕ್ ಹಾಗೂ ಲಾರಿ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಉಡುಪಿ ಪೆರಂಪಳ್ಳಿಯ ಯುವಕನೋರ್ವ ಮೃತಪಟ್ಟ ಘಟನೆ ಮಾಸ್ತಿಕಟ್ಟೆ ಯಡೂರು ಸಮೀಪ ಬುಧವಾರ ರಾತ್ರಿ ನಡೆದಿದೆ. ಉಡುಪಿ ಪೆರಂಪಳ್ಳಿ ನಿವಾಸಿ ಜೋಸೆಫ್ ಗೋಮ್ಸ್ (28) ಮೃತ ದುರ್ದೈವಿ.‌ ಇವರು ಸ್ನೇಹಿತನ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಲಾರಿ  ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗೋಮ್ಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.