ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ
ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ ಪಡೆಯಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರಿಗೆ ಕಾಳಮೆಣಸು, ಗೇರು, ಜಾಯಿಕಾಯಿ, ಅನಾನಸು, ಅಂಗಾಂಶ ಬಾಳೆ, ರಾಗದ ಕಂದು ಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬುಟಾನ್, ಮಾಂಗೋಸ್ಟೀನ್ ಮತ್ತು ಡ್ರಾಗನ್ ಫ್ರೂಟ್ ಹೊಸ ತೋಟಗಳ ಸ್ಥಾಪನೆಗೆ ಶೇ. 40 ರ ಸಹಾಯಧನ, ಸಣ್ಣ ಸಸ್ಯಾಗಾರಗಳ ನರ್ಸರಿ ಸ್ಥಾಪನೆಗೆ ಶೇ. 50 ರ ಸಹಾಯಧನ, ಅಂಗಾಂಶ ಕೃಷಿ ಘಟಕ ಸ್ಥಾಪನೆಗೆ ಶೇ.40 […]
ಹಲಸಿನ ಮೌಲ್ಯವರ್ಧನೆಯಿಂದ ರೈತರ ಆರ್ಥಿಕ ಸಬಲತೆ ಸಾಧ್ಯ: ಯಶ್ ಪಾಲ್ ಸುವರ್ಣ
ಉಡುಪಿ: ಮಲೆನಾಡು ಸೇರಿದಂತೆ ಕರಾವಳಿ ಭಾಗದ ಪೌಷ್ಠಿಕ ಆಹಾರಗಳಲ್ಲಿ ಒಂದಾದ ಹಲಸು ಇಲ್ಲಿ ಹೇರಳವಾಗಿ ಉತ್ಪತ್ತಿಯಾಗುತ್ತದೆ. ಇದಕ್ಕೆ ಹೆಚ್ಚಿನ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಯನ್ನು ಒದಗಿಸುವುದರಿಂದ ರೈತರು ಹೆಚ್ಚಿನ ಲಾಭ ಪಡೆಯುವುದರೊಂದಿಗೆ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಉಡುಪಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರ ಇಲ್ಲಿನ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಹಾಗೂ ರೋಬೋಸಾಫ್ಟ್ ಟೆಕ್ನೋಲಾಜಿಸ್ […]
ಹವಾಮಾನಾಧಾರಿತ ಬೆಳೆ ವಿಮೆ ಪಾವತಿ: ಜಮಾ ಆಗದ ಮೊತ್ತಕ್ಕಾಗಿ ವಿಮಾ ಶಾಖೆ ಸಂಪರ್ಕಿಸಿ
ಉಡುಪಿ: ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ 2021-22 ನೇ ಸಾಲಿನಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ನೊಂದಾವಣೆ ಮಾಡಿಸಿದ ರೈತರ ವಿಮಾ ಪ್ರಕರಣಗಳಲ್ಲಿ 4642 ವಿಮಾ ಪ್ರಕರಣಗಳಿಗೆ ರೂ 6,15,57,981 ಪರಿಹಾರ ಮೊತ್ತವು ಅಕ್ಟೋಬರ್ 31 ರಂದು ದಿನಾಂಕ 31-10-2022 ರಿಂದ ಅಗ್ರಿಕ್ಚರ್ ವಿಮಾ ಕಂಪನಿಯ ವತಿಯಿಂದ ಪಾವತಿಯಾಗುತ್ತಿದೆ. 2021-22 ನೇ ಸಾಲಿನಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಒಟ್ಟು 5734 ಪ್ರಕರಣಗಳು ನೋಂದಣಿಯಾಗಿದ್ದು 1092 ಪ್ರಕರಣಗಳು ಬೆಳೆ ಸಮೀಕ್ಷೆ ಕಾರ್ಯದಲ್ಲಿ ಬೆಳೆ ತಾಳೆಯಾಗದ […]
ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಸರ್ಕಾರದಿಂದ ಅಗತ್ಯ ಸಹಕಾರ ನೀಡಿಕೆ: ರಘುಪತಿ ಭಟ್
ಬ್ರಹ್ಮಾವರ: ಜಿಲ್ಲೆಯಲ್ಲಿ ಕೃಷಿ ಕಾಲೇಜು ಆರಂಭಿಸುವ ಬಗ್ಗೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿ.ವಿ ಮೂಲಕ ಅಗತ್ಯ ಕ್ರಮ ಕೈಗೊಳ್ಳಬೇಕಿದ್ದು, ಕರಾವಳಿ ಪ್ರದೇಶದಲ್ಲಿ ಕೃಷಿ ಕಾಲೇಜು ಅತ್ಯಂತ ಅಗತ್ಯವಾಗಿದೆ. ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಈಗಾಗಲೇ ಹೆಚ್ಚಿನ ಪ್ರಮಾಣದ ಅಗತ್ಯ ಮೂಲಭೂತ ಸೌಲಭ್ಯಗಳು, ವಿಜ್ಞಾನಿಗಳು, ಸಿಬ್ಬಂದಿಗಳು ಲಭ್ಯವಿದ್ದು ಶೀಘ್ರದಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಅಗತ್ಯ ಸಹಕಾರ ನೀಡಲಾಗುವುದು ಎಂದರು. ಅವರು ಶನಿವಾರ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ […]