ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ
ಕಾರ್ಕಳ: ತೋಟಗಾರಿಕೆ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ, 2023 ರ ಜೂನ್ 1ರಿಂದ 2024 ರ ಮಾರ್ಚ್ 30 ವರೆಗೆ, ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 22, ಹೆಚ್ಚಿನ ಮಾಹಿತಿಗಾಗಿ: http://horticulturedir.Karnataka.gov.in ತೋಟಗಾರಿಕೆ ಉಪ ನಿರ್ದೇಶಕರು ಉಡುಪಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.