ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್
ಬೆಂಗಳೂರು: ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ (ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಚ್ಚೇಗೌಡರ ಮಗ) ಅವರು ಕಾಂಗ್ರೆಸ್ ಪಕ್ಷ ಸೇರಲು ಮುಹೂರ್ತ ಫಿಕ್ಸ್ ಆಗಿದೆ. ಶರತ್ ಅವರು ಇದೇ ಅಕ್ಟೋಬರ್ 25 ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರು ಶರತ್ ಬಚ್ಚೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದರು. ಇದೀಗ ಕಾಂಗ್ರೆಸ್ ಸೇರಲು ಶರತ್ ಒಪ್ಪಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ. […]