ಅಜ್ಜರಕಾಡು ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಿ: ಸಮಸ್ಯೆ ಬಗೆಹರಿಸಲು‌ ಆಗ್ರಹ

ಉಡುಪಿ: ಅಜ್ಜರಕಾಡು ಸರ್ಕಾರಿ ಆಸ್ಪತ್ರೆ ಕಡತದಲ್ಲಿ ಮಾತ್ರ ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿದೆಯೇ ವಿನಾ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ. ಈಗ ಕೇಂದ್ರ ಹಾಗೂ ರಾಜ್ಯ ಎರಡು ಕಡೆ ಬಿಜೆಪಿ ಸರ್ಕಾರವಿದ್ದು, ಜಿಲ್ಲೆಯ ಶಾಸಕರು, ಸಂಸದರು ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸುವುದರ ಜತೆಗೆ ಸಮಸ್ಯೆಗಳನ್ನು ಸರಿಪಡಿಸಲು ಮುಂದಾಗಬೇಕು ಎಂದು ಮನೋವೈದ್ಯ ಡಾ. ಪಿ.ವಿ. ಭಂಡಾರಿ  ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಪ್ರತಿದಿನ 600 ಹೊರರೋಗಿಗಳು ಹಾಗೂ 150ಕ್ಕೂ ಅಧಿಕ ಒಳರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಆದರೆ 17ವೈದ್ಯರು, 25ಕ್ಕೂ ಅಧಿಕ ದಾದಿಯರು, 30ಕ್ಕೂ […]