ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳ ಸಜೀವದಹನ
ಮುಂಬೈ: ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ 10 ಮಕ್ಕಳು ಮೃತಪಟ್ಟ ಘಟನೆ ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಮುಂಜಾನೆ 2 ಗಂಟೆ ಸುಮಾರಿಗೆ ನವಜಾತ ಶಿಶುಗಳ ತೀವ್ರ ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ ಇಡೀ ವಾರ್ಡ್ ಅನ್ನು ವ್ಯಾಪಿಸಿದೆ. ಇದರಿಂದ 10 ಮಕ್ಕಳು ಮೃತಪಟ್ಟಿದ್ದು, 7 ಮಕ್ಕಳನ್ನು ರಕ್ಷಿಸಲಾಗಿದೆ. ಮೃತಪಟ್ಟ ಮಕ್ಕಳು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.