ಅಜ್ಜರಕಾಡಿನ ಜಿಲ್ಲಾಸ್ಪತ್ರೆ ಮೂರು ದಿನ ಸೀಲ್ ಡೌನ್..

ಉಡುಪಿ: ಇಲ್ಲಿನ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿಲ್ಲಾಸ್ಪತ್ರೆಗೆ ಹೆಚ್ಚೆಚ್ಚು ರೋಗಿಗಳು ಭೇಟಿ ನೀಡುತ್ತಿದ್ದು, ಇದರಿಂದ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಯನ್ನು ಬಂದ್ ಮಾಡಿ, ಒಳಗಿನಿಂದ ಸ್ಯಾನಿಟೈಸರ್ ಮಾಡಿ ಶುಚಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಸ್ಪತ್ರೆಯ ಮೂಲಗಳು ತಿಳಿಸಿವೆ. ತುರ್ತು ಚಿಕಿತ್ಸೆಯನ್ನು ಹೊರತುಪಡಿಸಿ ಹೊರರೋಗಿಗಳ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಚಿಕಿತ್ಸೆ, ಐಸೋಲೇಷನ್ […]