ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಸಲ್ಲಿಸಿ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಸಮುದಾಯಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: […]

ಬಾಲಕರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಕೇಂದ್ರಕ್ಕೆ ಒಂದು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಮಂಜೂರಾಗಿದ್ದು, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 100 ವಿದ್ಯಾರ್ಥಿಗಳಿಗೆ ವಾಸಿಸಲು ಯೋಗ್ಯವಾದ, ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಕನಿಷ್ಠ 5000 ಚದರ ಅಡಿ ವಿಸ್ತೀರ್ಣದ ಕಟ್ಟಡವನ್ನು ಬಾಡಿಗೆಗೆ ನೀಡಲು ಸಿದ್ಧವಿರುವ ಕಟ್ಟಡದ ಮಾಲಕರು, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅನೈತಿಕ ಚಟುವಟಿಕೆ ಹಿನ್ನೆಲೆ; ಇಲಾಖೆಯಿಂದ ಅನುಮತಿ‌ ಪಡೆಯಲು ಪಿಜಿ, ಹಾಸ್ಟೇಲ್ಗಳಿಗೆ ಪೊಲೀಸ್ ಇಲಾಖೆ ಸೂಚನೆ

ಮಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನಗರದಲ್ಲಿ ಪಿಜಿ, ಹಾಸ್ಟೆಲ್ ಗಳು ಹಾಗೂ ಇತರ ಸರ್ವೀಸ್ ಅಪಾರ್ಟ್ ಮೆಂಟ್‌ಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಹಾಸ್ಟೆಲ್, ಪಿಜಿ, ಸರ್ವೀಸ್ ಅಪಾರ್ಟ್ ‌ಮೆಂಟ್‌ಗಳು ಹಾಗೂ ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲೀಕರು, ಪಾಲುದಾರರು, ಆಡಳಿತ ಮಂಡಳಿ ಕಡ್ಡಾಯವಾಗಿ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆಯಬೇಕೆಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಆದೇಶ ಮಾಡಿದ್ದಾರೆ.

ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಮೇ 15: ಉಡುಪಿ ತಾಲ್ಲೂಕು ಮಣಿಪಾಲದಲ್ಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನಿಲಯದಲ್ಲಿ ಒಟ್ಟು 50 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಶೇ.75% ಅಲ್ಪಸಂಖ್ಯಾತ ಮತ್ತು ಶೇ.25% ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ. ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರಬೇಕು. ವಿದ್ಯಾರ್ಥಿಯು […]

ಪ.ಜಾತಿ, ಪಂಗಡ ವಿದ್ಯಾರ್ಥಿನಿಲಯ ಸೇರ್ಪಡೆಗೆ ಅರ್ಜಿ ಆಹ್ವಾನ

ಉಡುಪಿ, ಮೇ 15: 2019-20 ನೇ ಸಾಲಿಗೆ ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಹಾಗೂ ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ವಿದ್ಯಾರ್ಥಿಗಳ ಸೇರ್ಪಡೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ.ಜಾತಿ ವಿದ್ಯಾರ್ಥಿ ನಿಲಯದ ವಿವರ: ಮೆಟ್ರಿಕ್ ಪೂರ್ವ ಗಂಡು ಮಕ್ಕಳ ವಸತಿ ನಿಲಯ ಕುಂಜಿಬೆಟ್ಟು, ಕೂರಾಡಿ, ಯಡ್ತಾಡಿ, ಪಡುಬಿದ್ರಿ, ಮೆಟ್ರಿಕ್ ಪೂರ್ವ ಹೆಣ್ಣು ಮಕ್ಕಳ ವಸತಿ ನಿಲಯ ಯಡ್ತಾಡಿ, ಕೂರಾಡಿ, ಕಾಪು, […]