ರಾಜ್ಯದ ಹಾಸ್ಟೆಲ್‍ಗಳ ಸ್ಥಿತಿಗತಿ ಕುರಿತ ವರದಿ ಸಿದ್ದ- ಡಾ. ವನಿತಾ ತೊರವಿ
ಉಡುಪಿ: ರಾಜ್ಯದಲ್ಲಿರುವ ವಿವಿಧ ಇಲಾಖೆಗಳ ವಸತಿ ನಿಲಯಗಳ ಸ್ಥಿತಿಗತಿ ಕುರಿತಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಖುದ್ದು ಭೇಟಿ ನೀಡಿ ವರದಿಯನ್ನು ಸಿದ್ದಪಡಿಸಿದ್ದು, ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ತೊರವಿ ಹೇಳಿದ್ದಾರೆ. ಅವರು ಶನಿವಾರ, ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಮಹಿಳಾ […]