ಹೋಟೆಲ್ ಮಾಲೀಕ ಆತ್ಮಹತ್ಯೆಗೆ ಶರಣು

ಮಂಗಳೂರು: ಇಲ್ಲಿನ ಬಜಪೆ ನಗರದ ಹೋಟೆಲ್ ಮಾಲೀಕ ಯಶವಂತ್ ಶೆಟ್ಟಿ (49) ತನ್ನದೇ ಹೋಟೆಲ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತ ಯಶವಂತ್ ದಕ್ಷಿಣ ಕನ್ನಡ ಜಿಲ್ಲೆಯ ಕಂದಾವರ ತಾಲೂಕು ಪಂಚಾಯತ್ ಸದಸ್ಯ ವಿಶ್ವನಾಥ್ ಶೆಟ್ಟಿ ಅವರ ಸಹೋದರ‌. ಮೃತ ಯಶವಂತ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದರಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.