ಮನೆ ನಿರ್ಮಾಣಕ್ಕೆ ಸಹಾಯಧನ

ಉಡುಪಿ, ಜೂನ್ 1: 2018-19 ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆಯಡಿ 120 ಗುರಿಯನ್ನು ನಿಗಧಿಪಡಿಸಲಾಗಿದ್ದು, ಹೊಸ ಮನೆ ನಿರ್ಮಿಸಲು ಸಹಾಯಧನಕ್ಕಾಗಿ ಉಡುಪಿ ನಗರಸಭಾ ವ್ಯಾಪ್ತಿಯ ಸ್ವಂತ ನಿವೇಶನ ಹೊಂದಿರುವ ವಸತಿ ರಹಿತರು ಮನೆ ನಿರ್ಮಿಸಲು ಸಹಾಯಧನ ಪಡೆಯಬಹುದಾಗಿದೆ. ಆಸಕ್ತರು ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಜೂನ್ 30 ರ ಒಳಗೆ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಿ, ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭಾ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.