ಸ್ವದೇಶೀ ನಿರ್ಮಿತ ಗರ್ಭಕಂಠದ ಕ್ಯಾನ್ಸರ್ ಲಸಿಕೆ ಕೆಲವೇ ತಿಂಗಳಲ್ಲಿ ಬಿಡುಗಡೆ: ಅಡರ್ ಪೂನಾವಾಲಾ
ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮಾ ವೈರಸ್ (ಎಚ್‌ಪಿವಿ) ಲಸಿಕೆಯನ್ನು ಕೆಲವೇ ತಿಂಗಳುಗಳಲ್ಲಿ ಬಿಡುಗಡೆ ಮಾಡಲಾಗುವುದು ಮತ್ತಿದು 200-400 ರೂಪಾಯಿಗಳ ಕೈಗೆಟುಕುವ ಬೆಲೆಯಲ್ಲಿ ಜನರಿಗೆ ಲಭ್ಯವಾಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅಡರ್ ಪೂನವಾಲಾ ಗುರುವಾರ ತಿಳಿಸಿದ್ದಾರೆ. ಲಸಿಕೆಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸಿರುವುದನ್ನು ಘೋಷಿಸಲು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್, ಲಸಿಕೆ ಕೈಗೆಟುಕುವ ಬೆಲೆಯಲ್ಲಿರುತ್ತದೆ ಮತ್ತು ಇದು ಸಾಮಾನ್ಯ […]