ಬೆಂಗೇರಿಯಲ್ಲಿ ಸಿದ್ಧವಾಗುತ್ತಿವೆ ಸಾವಿರಾರು ತ್ರಿವರ್ಣ ಧ್ವಜಗಳು : ರಾಷ್ಟ್ರ ಧ್ವಜಗಳಿಗೆ ಭಾರೀ ಬೇಡಿಕೆ

ಹುಬ್ಬಳ್ಳಿ: ರಾಷ್ಟ್ರಧ್ವಜ ತಯಾರಿಕೆಗೆ ಭಾರತೀಯ ಮಾನಕ ಸಂಸ್ಥೆ (ಬಿಐಎಸ್)ಯಿಂದ ಮಾನ್ಯತೆ ಪಡೆದ ದೇಶದ ಏಕೈಕ ಸಂಸ್ಥೆ ಎಂದರೆ ಅದು ಹುಬ್ಬಳ್ಳಿಯ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ. ಕೋವಿಡ್ ನಂತರ ಮತ್ತೆ ಇಲ್ಲಿನ ರಾಷ್ಟ್ರಧ್ವಜಗಳಿಗೆ ದೇಶಾದ್ಯಂತ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆ ಸಂಸ್ಥೆಯು ಈ ವರ್ಷ ಮೂರು ಕೋಟಿ ರೂಪಾಯಿ ವಹಿವಾಟು ನಡೆಸುವ ನಿರೀಕ್ಷೆಯನ್ನು ಹೊಂದಿದೆ. ಈ ಹಿಂದಿನ ದಿನಗಳಿಗೆ ಹೋಲಿಕೆ ‌ಮಾಡಿದರೆ ರಾಷ್ಟ್ರಧ್ವಜಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಪ್ರತಿ ವರ್ಷದಿಂದ ವರ್ಷಕ್ಕೆ ಚೇತರಿಕೆಯನ್ನು ಕಂಡಿದೆ. ಕಳೆದ […]