ರಕ್ತದಾನದಿಂದ ಮಾನವೀಯ ಸಮಾಜ ಕಾಣಲು ಸಾಧ್ಯ: ಎಸ್. ಜಯಕರ ಶೆಟ್ಟಿ

ಕುಂದಾಪುರ: ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕದ ನೇತೃತ್ವದಲ್ಲಿ ಅಭಯಹಸ್ತ ಹೆಲ್ಪ್ ಲೈನ್ ಉಡುಪಿ, ರೋಟರಿ ಕ್ಲಬ್ ತೆಕ್ಕಟ್ಟೆ, ಹೆಲ್ಪಿಂಗ್ ಹ್ಯಾಂಡ್ ಕುಂದಾಪುರ, ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ, ಕುಂದಾಪುರ ಇವರ ಜಂಟಿ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಭಾನುವಾರ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಮೊಗವೀರ ಯುವ ಸಂಘಟನೆ ರಿ ಉಡುಪಿ ಜಿಲ್ಲಾಧ್ಯಕ್ಷ ಶಿವರಾಮ ಕೆ.ಎಂ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ, ಮಾತನಾಡಿ ಸಾಮಾನ್ಯವಾಗಿ ರಸ್ತೆ ಅಪಘಾತದಲ್ಲಿ ರಕ್ತಸ್ರಾವಗೊಂಡ ರೋಗಿಗಳು […]