ಸೆಮಿ-ಫೈನಲ್ಗೆ ತಂಡಕ್ಕೆ ಸೇರಿಸಿಕೊಳ್ಳುವ ಚಿಂತನೆ : ಮುಂದಿನ ಎರಡು ಪಂದ್ಯಗಳಿಗೆ ಹಾರ್ದಿಕ್ ಪಾಂಡ್ಯ ಅಲಭ್ಯ
ಹೈದರಾಬಾದ್ : ಆಲ್‌ರೌಂಡರ್ ಮತ್ತು ಉಪನಾಯಕ ಹಾರ್ದಿಕ್ ಪಾಂಡ್ಯ ಅವರು ಮುಂದಿನ ಎರಡು ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ.ಪುಣೆಯಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದ ವೇಳೆ ಪಾದದ ಗಾಯಕ್ಕೆ ತುತ್ತಾದ ಹಾರ್ದಿಕ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಪಾದದ ಗಾಯಕ್ಕೆ ತುತ್ತಾದ ಹಾರ್ದಿಕ್ ಪಾಂಡ್ಯ ಚೇತರಿಸಿಕೊಳ್ಳಲು ಇನ್ನಷ್ಟೂ ದಿನಗಳು ಬೇಕಾಗಬಹುದು ಎಂಬ ಮಾಹಿತಿಯನ್ನು ಮೂಲಗಳು ನೀಡಿವೆ. ಪುಣೆಯ ಎಮ್ಸಿಎ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ […]