ಫಲಕ್ನುಮಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭಾರಿ ಬೆಂಕಿ; 4 ಬೋಗಿಗಳು ಸಂಪೂರ್ಣ ಭಸ್ಮ

ಹೈದರಾಬಾದ್ (ತೆಲಂಗಾಣ):ಯಾದಾದ್ರಿ ಭುವನಗಿರಿ ಜಿಲ್ಲೆಯ ಪಗಿಡಿಪಲ್ಲಿ ಮತ್ತು ಬೊಮ್ಮಾಯಿಪಲ್ಲಿ ನಡುವೆ ಅವಘಡ ಸಂಭವಿಸಿತು. ಫಲಕ್ನುಮಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡು ನಾಲ್ಕು ಬೋಗಿಗಳು ಸುಟ್ಟು ಕರಕಲಾದ ಘಟನೆ ಇಂದು ನಡೆದಿದೆ.ಫಲಕ್ನುಮಾ ಎಕ್ಸ್‌ಪ್ರೆಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಾಲ್ಕು ಬೋಗಿಗಳು ಸಂಪೂರ್ಣ ಸುಟ್ಟು ಹೋಗಿವೆ. ವಿಷಯ ತಿಳಿದ ತಕ್ಷಣ ರೈಲ್ವೇ ಸಿಬ್ಬಂದಿ ರೈಲು ನಿಲ್ಲಿಸಿ ಎರಡೂ ಬೋಗಿಗಳಿಂದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ಪ್ರಾಣಾಪಾಯ ತಪ್ಪಿದೆ. ಅಪಾರ ಪ್ರಮಾಣದ ಬೆಂಕಿ 5 ಮತ್ತು 6ನೇ ಬೋಗಿಗೆ ಹರಡಿಕೊಂಡಿತು. ಕೂಡಲೇ […]