ವಿಧಾನ ಪರಿಷತ್ ನಲ್ಲಿ ಹೈಡ್ರಾಮ: ಸಭಾಪತಿ ಕುರ್ಚಿಗಾಗಿ ಬಿಜೆಪಿ, ಕಾಂಗ್ರೆಸ್ ಸದಸ್ಯರ ಮಧ್ಯೆ ಕಿತ್ತಾಟ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಪಟ್ಟಂತೆ ಆಡಳಿತ ಪಕ್ಷವಾದ ಬಿಜೆಪಿ, ಪ್ರತಿಪಕ್ಷವಾದ ಕಾಂಗ್ರೆಸ್ ನಡುವೆ ಸಂಘರ್ಷಮಯ ವಾತಾವರಣ ನಿರ್ಮಾಣವಾಗಿ ವಿಧಾನ ಪರಿಷತ್‍ನಲ್ಲಿಂದು ಕೋಲಾಹಲ ಉಂಟಾಯಿತು. ಇಂದು ಬೆಳಗ್ಗೆ ಸಭಾಪತಿ ಪೀಠದಲ್ಲಿ ಪ್ರತಾಪ್‍ಚಂದ್ರಶೆಟ್ಟಿ ಅವರನ್ನು ಕೂರಲು ಬಿಡದೆ ಬಿಜೆಪಿ ಸದಸ್ಯರು ಗದ್ದಲ ಮಾಡಿದರು. ಅದಕ್ಕೆ ಕಾಂಗ್ರೆಸ್ ಸದಸ್ಯರು ಪ್ರತಿರೋಧ ವಿಧಾನ ಪರಿಷತ್‍ನಲ್ಲಿ ಅಲ್ಲೋಲ-ಕಲ್ಲೋಲವಾಯಿತು. ಸಭಾಪತಿ ಪ್ರತಾಪ್‍ಚಂದ್ರಶೆಟ್ಟಿ ಅವರು ಒಳಬರಲು ಸಾಧ್ಯವಾಗಲಿಲ್ಲ. ಆ ವೇಳೆ ಸಭಾಪತಿ ಅವರ ಪೀಠದ ಬಳಿ ಕಾಂಗ್ರೆಸ್ ಸದಸ್ಯರು ಧಾವಿಸಿ ಉಪಸಭಾಪತಿ […]