ನಾನು ರಾಜೀನಾಮೆ ಕೊಡಲು ಸಿದ್ಧ: ಸಿಎಂ ಯಡಿಯೂರಪ್ಪ ಸ್ಫೋಟಕ ಹೇಳಿಕೆ

ಬೆಂಗಳೂರು: ನನ್ನ ಮೇಲೆ ಹೈಕಮಾಂಡ್ ವಿಶ್ವಾಸ ಇಟ್ಟು ಮುಖ್ಯಮಂತ್ರಿ ಸ್ಥಾನವನ್ನು ಕೊಟ್ಟಿದೆ. ಅವರ ವಿಶ್ವಾಸ ನನ್ನ ಮೇಲೆ ಇರುವರೆಗೆ ಈ ಹುದ್ದೆಯಲ್ಲಿ ಮುಂದುವರಿಯುತ್ತೇನೆ. ಯಾವಾಗ ರಾಜೀನಾಮೆ ಕೊಡಿ ಎಂದು ಹೈಕಮಾಂಡ್ ಹೇಳುತ್ತಾರೊ, ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಈ ಬಗ್ಗೆ ನನ್ನ ಯಾವುದೇ ಗೊಂದಲವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನಗೆ ಅವಕಾಶ ಕೊಟ್ಟಿದ್ದಾರೆ. ಅದನ್ನು ಶಕ್ತಿ‌ಮೀರಿ ಬಳಸಿಕೊಳ್ಳುತ್ತೇನೆ. ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ಉಳಿದದ್ದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದೂ ಹೇಳಿದರು. […]