11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಧಿಸೂಚನೆ ಹೊರಡಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ

ಬೆಂಗಳೂರು: ಕರ್ನಾಟಕ ಸರ್ಕಾರ ಮಂಗಳವಾರ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಅಧಿಸೂಚ ನೆಯ ಪ್ರಕಾರ, ಕಪಿಲ್ ಮೋಹನ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದ್ದು, ಉಮಾಶಂಕರ್ ಎಸ್ ಆರ್ ಅವರನ್ನು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಮತ್ತು ಮಂಜುನಾಥ ಪ್ರಸಾದ್ ಎನ್ ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಕೆಎಸ್‌ಆರ್‌ಟಿಸಿ ಎಂಡಿ ವಿ ಅನ್ಬು […]