ಪ್ರತಿ ತಾಲೂಕಿನಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಾಗ ಗುರುತಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನಿಷ್ಠ 1 ರಿಂದ 2 ಗೋಶಾಲೆಗಳನ್ನು ನಿರ್ಮಿಸಲು ಅಗತ್ಯವಿರುವ ಜಾಗವನ್ನು ಗುರುತಿಸಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಭಂದಕ ಮತ್ತು ಸಂರಕ್ಷಣೆ ನಿಯಮ 2020 ನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ರೈತರು ಮತ್ತು ಸಾರ್ವಜನಿಕರು ತಮ್ಮಲ್ಲಿನ ಅನುತ್ಪಾದಕ ಜಾನುವಾರುಗಳು, ಅಪಘಾತಗೊಂಡ ಜಾನುವಾರು, ಮತ್ತಿತರ ಜಾನುವಾರುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಿದಾಗ, […]