ಈದ್ಗಾ ಮೈದಾನ : ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಚಾಮರಾಜಪೇಟೆ ನಾಗರಿಕರ ಒಕ್ಕೂಟದಿಂದ ನವೆಂಬರ್ 1ರಿಂದ 3 ದಿನಗಳ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ಕೊಟ್ಟಿದೆ.ಅಲ್ಲದೆ, ಈದ್ಗಾ ಮೈದಾನ ಬಳಕೆ ಮಾಡಲು ಒಂದು ವೇಳೆ ಕಾನೂನು ಅಡಚಣೆಗಳು ಉಂಟಾದಲ್ಲಿ ಅರ್ಜಿದಾರರ ಒಕ್ಕೂಟದಿಂದ ರಾಜ್ಯೋತ್ಸವ ಆಚರಣೆ ಮಾಡಲು ಜಿಲ್ಲಾಡಳಿತದಿಂದ ಪರ್ಯಾಯ ಮೈದಾನ ಒದಗಿಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ಸ್ಪಷ್ಟ ನಿರ್ದೇನ ನೀಡಿದೆ. ಬೆಂಗಳೂರು ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನವೆಂಬರ್​ 1ರಿಂದ 3ರವರೆಗೆ ಕರ್ನಾಟಕ ರಾಜ್ಯೋತ್ಸವ […]