ಜಲ ಇದ್ದರೆ ಜೀವ, ನಿತ್ಯವೂ ಜಲ ದಿನವಾಗಬೇಕು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಮಾನವ ಸೇರಿದಂತೆ ಎಲ್ಲಾ ಜೀವ ಸಂಕುಲಕ್ಕೆ ಜೀವ ಜಲವಾಗಿರುವ ನೀರಿನ ಮಹತ್ವ ಮತ್ತು ಅದರ ಸಂರಕ್ಷಣೆ ಕುರಿತಂತೆ ಪ್ರತೀ ಮನೆ ಮನೆಯಲ್ಲಿ ಜಾಗೃತಿ ಮೂಡಬೇಕು. ಜಲ ಇದ್ದರೆ ಮಾತ್ರ ಜೀವ ಎಂಬ ಅರಿವು ಎಲ್ಲರಲ್ಲೂ ಮೂಡಬೇಕು. ಪ್ರತಿನಿತ್ಯವೂ ನೀರಿನ ಸದ್ಬಳಕೆ ಮತ್ತು ಸಂರಕ್ಷಣೆಯ ಮಹತ್ವದ ಬಗ್ಗೆ ಪ್ರತಿಯೊಬ್ಬರೂ ಅರಿತಿರಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ನಗರಸಭೆಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಉಡುಪಿ ನಗರಸಭೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಮತ್ತು ನೆಹರು […]