ನಿಯಮ ಉಲ್ಲಂಘಿಸಿ ವ್ಯವಹಾರ: ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರು: ನಿಯಮ ಉಲ್ಲಂಘಿಸಿ ವ್ಯವಹಾರ ನಡೆಸುತ್ತಿದ್ದ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಿಗೆ ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. 553 ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ 131 ಹೋಟೆಲ್, ರೆಸ್ಟೋರೆಂಟ್, ಬಾರ್ಗಳಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ಅದರಂತೆ, ನಿಯಮ ಉಲ್ಲಂಘಿಸಿದ ಹೋಟೆಲ್, ರೆಸ್ಟೋರೆಂಟ್, ಬಾರ್ಗಳ ವಿರುದ್ಧ ಕೋಟ್ಪಾ, ಜೆಜೆ ಆ್ಯಕ್ಟ್ ಅಡಿ 2,300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ಡಿಸಿಪಿ […]