ಮಣಿಪಾಲ: ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಮಣಿಪಾಲ: ಶಿವಳ್ಳಿ ಗ್ರಾಮದ ಇಂದಿರಾ ಶಿವರಾಮ್ ಪಾಲಿಟೆಕ್ನಿಕ್ ಕಾಲೇಜಿನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಉಡುಪಿ ಸೆನ್ ಮತ್ತು ಪಿಐ ಪೊಲೀಸ್ ತಂಡವು ಎ.2 ರಂದು ಬಂಧಿಸಿದ್ದಾರೆ. ಬಂಧಿತನಿಂದ 2.110 ಕೆಜಿ ಗಾಂಜಾ ಹಾಗೂ 1 ಮೊಬೈಲನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಅಕ್ಷಯ್ ಹಾಕೆ ತಿಳಿಸಿದ್ದಾರೆ.