ಹೆಬ್ರಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಪ್ರಕರಣ ದಾಖಲು
ಹೆಬ್ರಿ: ಪರವಾನಿಗೆಯಿಲ್ಲದೇ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ,ಅಕ್ರಮ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಮುಲಾಜಿಲ್ಲದೇ ಕೇಸ್ ದಾಖಲಿಸುತ್ತಿದ್ದಾರೆ. ಉಡುಪಿ ಎಸ್ಪಿಯವರ ಖಡಕ್ ಸೂಚನೆ ಹಿನ್ನಲೆಯಲ್ಲಿ ಪೊಲೀಸರು ಅಕ್ರಮ ದಂಧೆಕೋರರಿಗೆ ಬಿಸಿಮುಟ್ಟಿಸುತ್ತಿದ್ದು, ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲು ಮಾತಿಬೆಟ್ಟು ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಮಾತಿಬೆಟ್ಟು ಪೆರ್ಮಾನು ಎಂಬಲ್ಲಿ ರತ್ನಾಕರ ಪೂಜಾರಿ ಎಂಬವರು ಹೊಳೆಯಿಂದ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1 ಯೂನಿಟ್ ಮರಳನ್ನು ವಶಪಡಿಸಿಕೊಂಡು ರತ್ನಾಕರ ಪೂಜಾರಿ […]
ಗಂಗೊಳ್ಳಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ: ಐವರ ಬಂಧನ
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೋವಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಕಾರ್ಮಿಕರನ್ನು ಬಂಧಿಸಿದ್ದಾರೆ. ಸೆ.12ರಂದು ಮೋವಾಡಿ ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅಡ್ಡೆಯ ಮೇಲೆ ಗಂಗೊಳ್ಳಿ ಠಾಣೆ ಪಿ.ಎಸ್.ಐ ಹರೀಶ್ ಆರ್. ಹಾಗೂ ಸಿಬ್ಬಂದಿ ತಂಡ ಈ ದಾಳಿ ನಡೆಸಿದೆ. ದಾಳಿಯಲ್ಲಿ ಉತ್ತರಪ್ರದೇಶದ ಮೈನೇಜರ್ (30), ಗುದ್ದು ಕುಮಾರ (20), ಜಿತೇಂದ್ರ ಕುಮಾರ್ (25), ದಿನೇಶ (22), ಮತ್ತು ಸ್ಥಳೀಯ ನಿವಾಸಿ ಆಲ್ಬನ್ (42) […]
ಕುಂದಾಪುರ: ಅಕ್ರಮ ಮರಳುಗಾರಿಕೆ ಧಕ್ಕೆಗೆ ದಾಳಿ; 2 ಟಿಪ್ಪರ್ ವಶ
ಕುಂದಾಪುರ: ತಾಲೂಕಿನ ಶಂಕರನಾರಾಯಣ ವ್ಯಾಪ್ತಿಯ ಭರತ್ಕಲ್ ಎಂಬಲ್ಲಿ ವಾರಾಹಿ ನದಿಯಿಂದ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆ, ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು ಮಾರ್ಗದರ್ಶನದಲ್ಲಿ ಭೂವಿಜ್ಞಾನಿ ಸಂಧ್ಯಾ ಅವರು ಇಂದು ಮುಂಜಾನೆ ಕಾರ್ಯಾಚರಣೆ ನಡೆಸಿ ಮರಳು ಧಕ್ಕೆಯಲ್ಲಿದ್ದ ಎರಡು ಲಾರಿಗಳನ್ನು ವಶಕ್ಕೆ ಪಡೆದರು. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 2 ಲಾರಿ ಹಾಗೂ […]
2 ಪ್ರತ್ಯೇಕ ದಾಳಿಯಲ್ಲಿ ನಾಲ್ಕು ಟಿಪ್ಪರ್; 20 ಮೆಟ್ರಿಕ್ ಟನ್ ಅಕ್ರಮ ಮರಳು ವಶ: ಗಣಿ ಇಲಾಖಾಧಿಕಾರಿಗಳಿಂದ ಕ್ಷಿಪ್ರ ಕಾರ್ಯಾಚರಣೆ
ಕುಂದಾಪುರ: ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ಮೊವಾಡಿ ಪರಿಸರದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ ಸೋಮವಾರ (ಡಿ.19) ಮದ್ಯಾಹ್ನ 12.30ಕ್ಕೆ ಭೂ ವಿಜ್ಞಾನಿ ಸಂಧ್ಯಾ ಅವರು ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಮೋವಾಡಿ ಪರಿಸರದಲ್ಲಿ ಕಾರ್ಯಚಾರಣೆ ನಡೆಸಿ ಪರವಾನಿಗೆ ರಹಿತವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ ಮರಳು ಸಹಿತ 2 ಟಿಪ್ಪರ್ […]