ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಕರಾವಳಿ ಪ್ರದೇಶಗಳು ಮತ್ತು ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನ ಗುಡ್ಡಗಾಡು ಪ್ರದೇಶಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣದ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ವಿಜಯನಗರ, ಮೈಸೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 14, ಭಾನುವಾರ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ ಮತ್ತು […]
ಮುಂದಿನ 4 ದಿನ ಅರಬ್ಬೀ ಸಮುದ್ರ ಪ್ರಕ್ಷುಬ್ಧ: ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಉಡುಪಿ/ಮಂಗಳೂರು: ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ, ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿರುವುದರಿಂದ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು ಮತ್ತು ಗಾಳಿಯ ವೇಗವು ಗಂಟೆಗೆ 40-45 ರಿಂದ 55 ಕಿ.ಮೀ ಇರುವುದರಿಂದ ಸಮುದ್ರವು ಪ್ರಕ್ಷುಬ್ದತೆಯಿಂದ ಕೂಡಿರುತ್ತದೆ ಹಾಗಾಗಿ ಮುಂದಿನ 4 ದಿನಗಳ ಕಾಲ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು ಸ್ಥಳೀಯರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ. ತುರ್ತು ಸಂದರ್ಭದಲ್ಲಿ ಕರೆಗಾಗಿ: […]
122 ವರ್ಷಗಳಲ್ಲಿ ಅತ್ಯಂತ ಕಡಿಮೆ ಮಳೆ ದಾಖಲು: 1901 ರಿಂದೀಚೆಗೆ ಅತಿ ಹೆಚ್ಚು ತಾಪಮಾನ ಕಂಡ ತಿಂಗಳು; ಸೆಪ್ಟೆಂಬರ್ ನಲ್ಲಿ ಮಳೆ ಸಾಧ್ಯತೆ
ಹೊಸದಿಲ್ಲಿ: 1901 ರಿಂದ ಇಡೀ ದೇಶದಲ್ಲಿ ಈ ಬಾರಿ ಆಗಸ್ಟ್ ಅತ್ಯಂತ ಶುಷ್ಕ ಮತ್ತು ಬೆಚ್ಚನೆಯ ತಿಂಗಳಾಗಿದೆ. ಮಧ್ಯ ಭಾರತ ಮತ್ತು ದಕ್ಷಿಣ ಪರ್ಯಾಯದ್ವೀಪ ಪ್ರದೇಶದಾದ್ಯಂತ ಆಗಸ್ಟ್‌ನಲ್ಲಿ ಮಾನ್ಸೂನ್ ಮಳೆಯು 122 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿದೆ, ಇದು ಇತಿಹಾಸದಲ್ಲಿ ಅತ್ಯಂತ ಕೆಟ್ಟ ಮತ್ತು ಕೊರತೆಯಿರುವ ಮಾನ್ಸೂನ್ ತಿಂಗಳುಗಳಲ್ಲಿ ಒಂದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ಹೇಳಿದೆ. ಈ ಆಗಸ್ಟ್‌ನಲ್ಲಿ ದೇಶದಾದ್ಯಂತ 162.7 ಮಿಮೀ ಮಳೆಯಾಗಿದ್ದು, ಇದು ವಾಸ್ತವಿಕ 254.9 ಮಿಮೀ ಗಿಂತ ಕಡಿಮೆಯಾಗಿದೆ. ದೇಶದಲ್ಲಿ […]
ರಾಜ್ಯದಲ್ಲಿ ಮತ್ತೆ ವರುಣನ ಪ್ರವೇಶ: ಮೂರು ನಾಲ್ಕು ದಿನ ಮಳೆ ಸಾಧ್ಯತೆ
ಬೆಂಗಳೂರು: ರಾಜಧಾನಿ ಸೇರಿ ಹದಿನಾಲ್ಕು ಜಿಲ್ಲೆಗಳಲ್ಲಿ ಇನ್ನು ಕೆಲವು ದಿನ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ. ಮುಂದಿನ ಮೂರು ದಿನ ಕಾಲ ಬೆಂಗಳೂರು ಸೇರಿದಂತೆ ಹದಿನಾಲ್ಕು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಕರ್ನಾಟಕದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಗಂಟೆಗೆ 30 ರಿಂದ 40 ಕಿ.ಮಿ ವೇಗದಲ್ಲಿ ಗಾಳಿ ಬೀಸಲಿದೆ. ಕರಾವಳಿ ಭಾಗದಲ್ಲಿ ಇದು ಇನ್ನೂ ಹೆಚ್ಚಿದ್ದು, 40 ರಿಂದ […]
ಆ.3 ಮತ್ತು 4 ರಂದು ಬಿರುಗಾಳಿ ಬೀಸುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಉಡುಪಿ: ಆ.3 ಮತ್ತು 4 ರಂದು ಜಿಲ್ಲೆಯ ಹಲವೆಡೆ ಗಂಟೆಗೆ ೩೦ ರಿಂದ ೪೦ ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಸಮುದ್ರ, ನದೀ ತೀರ, ಹಳ್ಳ ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಲಾಗಿದೆ. ಅಪಾಯಕಾರಿ ಕಟ್ತಡಗಳು, ಮರಗಳು, ಮತ್ತು ವಿದ್ಯುತ್ ಕಂಬಗಳ ಕೆಳಗೆ ಅಥವಾ ಹತ್ತಿರ ನಿಲ್ಲದೆ ಎಚ್ಚರಿಕೆಯಿಂದ ಇರುವಂತೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮನವಿ ಮಾಡಿದ್ದಾರೆ.