ಜುಲೈ 24 ರವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: ಉಡುಪಿಗೆ ಆರೆಂಜ್ ಅಲರ್ಟ್

ಉಡುಪಿ: ಕಳೆದ ಹಲವು ದಿನಗಳಿಂದ ಉತ್ತರ ಭಾರತ ಮತ್ತು ಇದೀಗ ಮುಂಬೈನಲ್ಲಿ ಅಬ್ಬರ ತೋರಿರುವ ಮುಂಗಾರು ಮಳೆಯು ಮತ್ತೊಮ್ಮೆ ಕರ್ನಾಟಕದತ್ತ ಮುಖ ಮಾಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಲಘುವಿನಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆಯು ನೀಡಿದೆ. ರಾಜ್ಯದಾದ್ಯಂತ ಬೀಳಲಿರುವ ಭಾರೀ ಮಳೆಯ (64.5 ಮಿಮೀ-115.5 ಮಿಮೀ) ಜೊತೆಗೆ ಕರಾವಳಿ ಕರ್ನಾಟಕದಲ್ಲಿ ಸೋಮವಾರ (ಜುಲೈ 24) ವರೆಗೆ ಅತಿ ಹೆಚ್ಚು (115.6 ಮಿಮೀ-204.5 ಮಿಮೀ) ಮಳೆಯಾಗುವ ಸಾಧ್ಯತೆಯಿದೆ. […]

ಜೂನ್ 28 ರ ವರೆಗೆ ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆಯ ಮನ್ಸೂಚನೆ ನೀಡಿದ ಹವಾಮಾನ ಇಲಾಖೆ

ಉಡುಪಿ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುರುವಾರದಿಂದ ಉತ್ತಮ ಮಳೆಯಾಗುತ್ತಿದ್ದು ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಕಣ್ಣಾ ಮುಚ್ಚಾಲೆ ಆಡುತ್ತಿದ್ದ ಮಳೆರಾಯ ಇದೀಗ ಸ್ವಲ್ಪ ಕೃಪೆ ತೋರಿದ್ದು ಕೃಷಿ ಚಟುವಟಿಕೆಗಳು ಮತ್ತೆ ಪುಟಿದೆದ್ದಿವೆ. ಹೊನ್ನಾವರ ತಾಲೂಕಿನಲ್ಲಿ ಗರಿಷ್ಠ 110 ಮಿಮಿ ಮಳೆಯಾಗಿದ್ದರೆ ಕುಮಟಾದಲ್ಲಿ 96 ಮಿಮಿ ಮತ್ತು ಭಟ್ಕಳದಲ್ಲಿ 86 ಮಿಮಿ ಮಳೆಯಾಗಿದೆ. ಆದಾಗ್ಯೂ, ಮಳೆಯ ಪ್ರಮಾಣವು ನಿರೀಕ್ಷಿತ ಮಟ್ಟದಲ್ಲಿಲ್ಲದೆ ಕುಸಿತವನ್ನು ದಾಖಲಿಸಿದೆ. ಬುಧವಾರದವರೆಗೂ ಕರಾವಳಿ ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಸಹಿತ ಭಾರೀ […]

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಹಾಗೂ ಮಳೆಯಾಗುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ ಹಾಗೂ ನದಿ ತೀರ ಪ್ರದೇಶಗಳಲ್ಲಿ ಇಳಿಯಬಾರದು. ಮಕ್ಕಳು ಮತ್ತು ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲಬಾರದು. […]

ಮೇ 10 ರಂದು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಹಗುರದಿಂದ ಮಧ್ಯಮ ಮಳೆಯಾಗುವ ಮತ್ತು 30-40 ಕಿಮೀ/ಪ್ರತಿ ಘಂಟೆ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೇ 10 ರಂದು ಕರಾವಳಿಯ ಉಡುಪಿ ಮತ್ತು ದ.ಕ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ (64.5 ಮಿ.ಮೀ ನಿಂದ 115.5 ಮಿ.ಮೀ) ಸಂಭವಿಸುವ ಸಾಧ್ಯತೆಯಿದೆ ಎಂದು ಇಲಾಖೆ […]

ಕರಾವಳಿ ಹಾಗೂ ಇತರೆಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಉಡುಪಿ/ ಮಂಗಳೂರು: ಮುಂದಿನ 03 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಸಹಿತ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಂಭವವಿದ್ದು, ಗಂಟೆಗೆ 30-40 ಕಿಮೀ ವೀಗದಲ್ಲಿ ಜೋರಾದ ಗಾಳಿ ಬೀಸುವ ಅನುಮಾವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.