ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಿ: ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಕೃಷಿ, ತೋಟಗಾರಿಕಾ ಬೆಳೆ ಸೇರಿದಂತೆ ಮನೆ ಹಾನಿಯ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ನಷ್ಟ ಅಂದಾಜಿಸುವುದರೊಂದಿಗೆ ಸರಕಾರದ ಮಾರ್ಗ ಸೂಚಿಯಂತೆ ಬಾಕಿ ಉಳಿದ ನಷ್ಟ ಪರಿಹಾರವನ್ನು ಶೀಘ್ರದಲ್ಲಿ ನೀಡಬೇಕೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈವರೆಗೂ ಮಳೆಯಿಂದ ರಸ್ತೆ , ಸೇತುವೆ, ಕೃಷಿ, […]