ಪ್ರತಿಯೊಬ್ಬರು ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ: ನ್ಯಾ. ಶರ್ಮಿಳಾ ಎಸ್
ಉಡುಪಿ: ಸಮಾಜದ ಪ್ರತಿಯೊಬ್ಬ ಪ್ರಜೆಯೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ. ಪ್ರಪಂಚದಾದ್ಯಂತ ಇರುವ ವಸ್ತುಗಳು, ಸರಕುಗಳು ಮತ್ತು ಸೇವೆಗಳ ಮೌಲ್ಯ, ಸಮಗ್ರತೆ, ವೆಚ್ಚ ಹಾಗೂ ಅವುಗಳ ಗುಣಮಟ್ಟದ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ ಈ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಹೇಳಿದರು. ಅವರು ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ […]