ಜುಲೈ 5ರಂದು ಬ್ರಹ್ಮಾವರದಲ್ಲಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ 5ನೇ ಶಾಖೆ ಉದ್ಘಾಟನೆ
ಬ್ರಹ್ಮಾವರ: ಕ್ಷೌರಿಕರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಸ್ಥಾಪಿಸಿರುವ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ 5ನೇ ಶಾಖೆಯು ಜು. 5 ರಂದು ಬ್ರಹ್ಮಾವರ ಸೈಂಟ್ ಅಂತೋನಿ ಪ್ರೆಸ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಈ ಕುರಿತು ಸಹಕಾರಿ ಅಧ್ಯಕ್ಷ ನವೀನ್‌ಚಂದ್ರ ಭಂಡಾರಿ ಮಾಹಿತಿ ನೀಡಿದರು. ಸಹಕಾರಿಯು ಉಡುಪಿ, ಕಾರ್ಕಳ, ಕುಂದಾಪುರ ಹಾಗೂ ಕಾಪುವಿನಲ್ಲಿ ಶಾಖೆಯನ್ನು ಹೊಂದಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಬಿ.ಎಚ್. ಕೃಷ್ಣ ರೆಡ್ಡಿ ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಬಾರ್ಕೂರು ಕಚ್ಚೂರು ಶ್ರೀನಾಗೇಶ್ವರ […]