ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ‘ಮನೆಮನೆ ಭಜನೆ- ಗ್ರಾಮ ಭಜನೆ’ ಉದ್ಘಾಟನೆ

ಉಡುಪಿ: ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ‘ಮನೆಮನೆ ಭಜನೆ- ಗ್ರಾಮ ಭಜನೆ’ಯನ್ನು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರು ಶನಿವಾರ  ಉದ್ಘಾಟಿಸಿದರು. ದೇವಸ್ಥಾನವೊಂದು ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳುವಾಗ ಜಾತಿಮತ ಭೇದವಿಲ್ಲದೆ ಆ ಗ್ರಾಮದ ಎಲ್ಲಾ ಭಕ್ತರ ಮನೆಗಳಲ್ಲಿ ಭಜನೆ ಮಾಡುವುದು ವಿಶಿಷ್ಟ ಕಲ್ಪನೆಯ ಕ್ರಾಂತಿಯಾಗಿದೆ. ನಾವು ಬೇರೆ ಬೇರೆ ರೀತಿಯ ಭಜನೆಗಳನ್ನು ಕಂಡಿದ್ದೇವೆ. ಇದು ಮಾತ್ರ ವಿಶಿಷ್ಟವಾದುದು. ಇದರಿಂದ  ದೇವಸ್ಥಾನದ ಜತೆ ಮನೆಗಳಲ್ಲಿಯೂ ಸಾನಿಧ್ಯ ವೃದ್ಧಿ ಯಾಗುತ್ತದೆ ಎಂದು ಶ್ರೀಪಾದರು ಹೇಳಿದರು. ದೇವಸ್ಥಾನದ […]