ಕುಂದಾಪುರದ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ ಉದ್ಘಾಟನೆ
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ ನ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಗಣೇಶ್ ಮೊಗವೀರ ಮಾತನಾಡಿ, ವಿದ್ಯಾರ್ಥಿಗಳಾದ ನೀವೆಲ್ಲರೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು. ಸಮಾರಂಭದಲ್ಲಿ ಉಪಸ್ಥಿತರಿರುವ ಟ್ರೈನಿಂಗ್ ಆಫೀಸರ್ ಅಭಿಲಾಷ್ ಕ್ಷತ್ರೀಯ ಮಾತನಾಡಿ, ಎಲ್ಲರೂ ಒಗ್ಗಟ್ಟಿನಿಂದ ಹಾಗೂ ಆಸಕ್ತಿಯಿಂದ ಕೂಡಿ ಕೆಲಸಮಾಡಬೇಕು ಎಂದು ಹೇಳಿದರು. ಉಪಸಂಯೋಜಕಿ ಮಮತಾ ರೈ ಮಾತನಾಡಿ, ಬದುಕು ಎನ್ನುವ ಯುದ್ಧದಲ್ಲಿ ತೇಜಸ್ಸು, ಧೈರ್ಯ, ಸ್ಥೈರ್ಯ, ಸ್ವಾಭಿಮಾನ […]