ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾದ ‘ಪದ್ಮಶಾಲಿ ಕ್ರೀಡೋತ್ಸವ’ ಉದ್ಘಾಟನೆ

ಉಡುಪಿ: ನಿಷ್ಠೆ ಪ್ರಾಮಾಣಿಕತೆ, ಬದ್ಧತೆ ಮತ್ತು ಅಪಾರ ಇಚ್ಚಾಶಕ್ತಿಗಳಿಂದ ಮಾತ್ರ ಸಮುದಾಯ ಸಂಘಟನೆಗಳು ಸಾಧ್ಯ ಹಾಗು ಕ್ರೀಡೆ ಸಾಂಸ್ಕ್ರತಿಕ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸುವುದರಿಂದ ಸಾಮಾಜಿಕ ಸಂಬಂಧಗಳು ಬೆಳೆದು ಸಂಘಟನೆಗಳು ಸದ್ರಢವಾಗುತ್ತದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆಯವರು ಅಭಿಮತ ವ್ಯಕ್ತ ಪಡಿಸಿದರು. ಅವರು ಭಾನುವಾರ ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ ಮಂಗಳೂರು ಇದರ ಆಶ್ರಯದಲ್ಲಿ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಇವರ […]