ಕುಂಜಿಬೆಟ್ಟುವಿನಲ್ಲಿ ಉಪ ವಿದ್ಯುತ್ ಕೇಂದ್ರ ಹಾಗೂ ಇತರ ಕಾಮಗಾರಿಗಳ ಅನಾವರಣ ಕಾರ್ಯಕ್ರಮ ಉದ್ಘಾಟನೆ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಒಟ್ಟು 124.72ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಹೆಗ್ಗುಂಜೆ, ಬೆಳ್ಮಣ್ ಮತ್ತು ಬೆಳಪು ಉಪ ವಿದ್ಯುತ್ ಕೇಂದ್ರ ಹಾಗೂ ಇತರ ಕಾಮಗಾರಿಗಳ ಅನಾವರಣ ಕಾರ್ಯಕ್ರಮ ಕುಂಜಿಬೆಟ್ಟುವಿನ ಕರ್ನಾಟಕ ವಿದ್ಯುಚ್ಛಕ್ತಿ ನೌಕರರ ಸಭಾಭವನದಲ್ಲಿ ಇಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇಂಧನ ಕ್ಷೇತ್ರಕ್ಕೆ ನೀಡಿದ ಕೊಡುಗೆಯಿಂದ ಇಂದು ವಿದ್ಯುತ್ ಸಮಸ್ಯೆಗಳು ನಿವಾರಣೆಯಾಗಿವೆ ಎಂದರು. ಮಂಗಳೂರು ಮೆಸ್ಕಾಂ […]