ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ಸ್ಥಳಾಂತರಗೊಂಡ ಕಚೇರಿಯ ಉದ್ಘಾಟನೆ
ಉಡುಪಿ: ನಗರದ ರಾಜ್ ಟವರ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರಿ ಸಂಘದ ಕಚೇರಿಯು ರವಿವಾರ ಪಿಪಿಪಿ ಕ್ರಾಸ್ ರಸ್ತೆಯ ಆಶಾ ಚಂದ್ರ ಟ್ರೇಡ್ ಸೆಂಟರ್ ಗೆ ಸ್ಥಳಾಂತರಗೊಂಡು ಉದ್ಘಾಟನೆಗೊಂಡಿತು. ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ನೂತನ ಕಚೇರಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಸಂಸ್ಥೆಯ ಉತ್ತರೋತ್ತರ ಅಭಿವೃದ್ಧಿಗೆ ಹಾರೈಸಿದರು. ಶಾಸಕ ಯಶ್ ಪಾಲ್ ಎ. ಸುವರ್ಣ ಮಾತನಾಡಿ, ಹೋಟೆಲ್ ಉದ್ಯಮಕ್ಕೆ ಉಡುಪಿಯು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದು, ಸಹಕಾರ ಕ್ಷೇತ್ರದಲ್ಲಿಯೂ […]