ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಉದ್ಘಾಟನೆ
ಉಡುಪಿ: ಇಂದಿನ ಭ್ರಷ್ಟ ರಾಜಕೀಯ ಪರಿಸ್ಥಿತಿಗೆ ಸಮಾಜವೇ ಕಾರಣ. ಸಮಾಜದ ಭಾವನೆ ಬದಲಾಯಿಸದಿದ್ದರೆ ದೇಶಕ್ಕೆ ವಿಪತ್ತು ಎದುರಾಗಲಿದೆ. ಆದುದರಿಂದ ಭ್ರಷ್ಟಾಚಾರ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದೇ ಪತ್ರಕರ್ತ ಮಾಡಬಹುದಾದ ಬಹು ದೊಡ್ಡ ದೇಶ ಸೇವೆ ಯಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ. ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರವಿವಾರ ನಡೆದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರಂಭವನ್ನು ಉದ್ದನೆಯ ಪೆನ್ನಿನ ಕ್ಯಾಪ್ ತೆಗೆದು ಪತ್ರಕರ್ತರಿಗೆ ಹಸ್ತಾಂತರಿಸುವ […]