ಮಾ.9 ರಂದು ಉಡುಪಿ ಜಿಲ್ಲಾ ನರ್ಸರಿಮೆನ್ ಅಸೋಸಿಯೇಶನ್ ಉದ್ಘಾಟನೆ

ಉಡುಪಿ ಜಿಲ್ಲಾ ನರ್ಸರಿಮೆನ್ ಅಸೋಸಿಯೇಶನ್ ಸಂಸ್ಥೆಯ ಉದ್ಘಾಟನೆ, ಸಸ್ಯಗಳ ಪ್ರದರ್ಶನ ಮತ್ತು ಮಾರಾಟವು ಮಾ. 9 ರಂದು ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಸುರೇಶ್ ಸುವರ್ಣ ತಿಳಿಸಿದ್ದಾರೆ. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30 ಕ್ಕೆ ಸಂಸ್ಥೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಗುರ್ಮೆ ಫೌಂಡೇಶನ್‌ನ ಪ್ರವರ್ತಕ ಸುರೇಶ್ ಶೆಟ್ಟಿ ಗುರ್ಮೆ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮವನ್ನು […]