ಇನಾಯತ್ ಆರ್ಟ್ ಗ್ಯಾಲರಿ ವತಿಯಿಂದ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜನೆ
ಕುಂಜಿಬೆಟ್ಟು: ಇಲ್ಲಿನ ಇನಾಯತ್ ಆರ್ಟ್ ಗ್ಯಾಲರಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವು ಜರುಗಿತು. ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ಇನಾಯತ್ ಆರ್ಟ್ ಗ್ಯಾಲರಿ ವತಿಯಿಂದ ಮಕ್ಕಳಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕುರಿತು ಚಿತ್ರಕಲೆ ಸ್ಫರ್ಧೆ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್ ಟಿ ಸಿದ್ದಲಿಂಗಪ್ಪ ಕಲಾವಿದರ ಚಿತ್ರಕಲಾ ಪ್ರದರ್ಶನ ಕಂಡು ಮೆಚ್ಚುಗೆ ವ್ಯಕ್ತಪಡಿಸಿ ಚಿತ್ರಕಲೆ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ಆರ್ಟ್ ಗ್ಯಾಲರಿ ಸ್ಥಾಪಕ ಲಿಯಾಕತ್ ಅಲಿ, […]