ರಾಷ್ಟ್ರೀಯ ಕಾಂಗ್ರೆಸ್‌ನಿಂದ 65 ಕೋಟಿ ರೂ. ತೆರಿಗೆ ಬಾಕಿ ವಸೂಲಾತಿ ನಡೆಸಿದ ಆದಾಯ ತೆರಿಗೆ ಇಲಾಖೆ
ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆಯು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನಿಂದ(INC) 115 ಕೋಟಿ ರೂ.ಗಳ ಒಟ್ಟು ತೆರಿಗೆಯಲ್ಲಿ 65 ಕೋಟಿ ರೂ.ಗಳನ್ನು ಯಶಸ್ವಿಯಾಗಿ ವಸೂಲಿ ಮಾಡಿದೆ ಎಂದು ವರದಿಯಾಗಿದೆ. ಮಂಗಳವಾರ ಕಾಂಗ್ರೆಸ್ ಪಕ್ಷದ ಖಾತೆಗಳಿಗೆ ಇಲಾಖೆ ಸ್ವಾಧೀನತೆ ಹೇರಿದ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆಯಿಂದ ವಸೂಲಾತಿ ನಡೆದಿದೆ. ಸ್ವಾಧೀನತೆಯು ಕಾನೂನು ಹಕ್ಕು ಅಥವಾ ಸ್ವತ್ತುಗಳ ವಿರುದ್ಧದ ಹಕ್ಕಾಗಿದ್ದು ಸಾಮಾನ್ಯವಾಗಿ ಖಾತೆಯಲ್ಲಿನ ಶುಲ್ಕಗಳು ಅಥವಾ ಸಾಲಗಳ ಮರುಪಡೆಯುವಿಕೆಗೆ ಅನ್ವಯಿಸುತ್ತದೆ. ಕಾಂಗ್ರೆಸ್ ಪಕ್ಷದ ಖಾತೆಯಲ್ಲಿ 115 ಕೋಟಿ ರೂಗಳ ಸ್ವಾದೀನತೆಗಾಗಿ ಆದಾಯ ತೆರಿಗೆ […]
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸಮಾಪ್ತ
ಲಾಲ್ ಚೌಕ್: ಶ್ರೀನಗರದ ಐತಿಹಾಸಿಕ ನಗರ ಕೇಂದ್ರವಾದ ಲಾಲ್ ಚೌಕ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ (ಜನವರಿ 29) ಭಾರತ್ ಜೋಡೋ ಯಾತ್ರೆಯನ್ನು ಮುಕ್ತಾಯಗೊಳಿಸಿದರು. ಭಾನುವಾರ ಬೆಳಗ್ಗೆ ರಾಹುಲ್ ಗಾಂಧಿ ಮತ್ತು ಇತರ ಹಿರಿಯ ನಾಯಕರ ಶ್ರೀನಗರ ನಗರದ ಹೊರವಲಯದ ಪಂಥಾ ಚೌಕ್‌ನ ರಾತ್ರಿ ವಾಸ್ತವ್ಯದ ಬಳಿಕ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಯಿತು. ಇತರ ಸ್ಥಳೀಯ ಪಕ್ಷಗಳ ಅನೇಕ ರಾಜಕಾರಣಿಗಳು ಲಾಲ್ ಚೌಕ್‌ಗೆ ರಾಹುಲ್ ಗಾಂಧಿ ಜೊತೆ ಮೆರವಣಿಗೆ ನಡೆಸಿದರು. […]
ಮುಂದಿನ ಚುನಾವಣೆಯಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಟಿಕೆಟ್: ಕಾಂಗ್ರೆಸ್ ಉಸ್ತುವಾರಿ ಡಿಕೆ ಶಿವಕುಮಾರ್
ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಟಿಕೆಟ್ ಸಿಗಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಡಿಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ. ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್ ಸಿಗುತ್ತದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದ್ದು, ಇಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಲ್ಲ. ಪಕ್ಷ ಅಧಿಕಾರಕ್ಕೆ ಬರಬೇಕು, ಅದು ಆದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ.ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ […]
ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ: 24 ವರ್ಷಗಳ ಬಳಿಕ ಗಾಂಧಿಯೇತರ ಅಧ್ಯಕ್ಷ
ನವದೆಹಲಿ: ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಸೋಲಿಸಿ 24 ವರ್ಷಗಳ ಬಳಿಕ ಮೊದಲ ಗಾಂಧಿಯೇತರ ಮತ್ತು ನಾಲ್ಕು ದಶಕಗಳ ಬಳಿಕ ಮೊದಲ ಪರಿಶಿಷ್ಟ ಜಾತಿಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 1988 ರಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನಿರ್ಣಯದ ಮೂಲಕ ಸೋನಿಯಾ ಗಾಂಧಿ ಅವರನ್ನು ಪಕ್ಷದ ಮುಖ್ಯಸ್ಥರಾಗಲು ಆಹ್ವಾನಿಸಿ, ಸೀತಾರಾಮ್ ಕೇಸರಿ ಅವರನ್ನು ಅನೌಪಚಾರಿಕವಾಗಿ ಪದಚ್ಯುತಗೊಳಿಸಿದ ನಂತರ 24 ವರ್ಷಗಳಲ್ಲಿ ಕಾಂಗ್ರೆಸ್ ಅನ್ನು ಮುನ್ನಡೆಸುವ ಮೊದಲ ಗಾಂಧಿಯೇತರ ವ್ಯಕ್ತಿಯಾಗಿ […]
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಅಕ್ರಮದ ಆರೋಪ ಹೊರಿಸಿದ ಶಶಿ ತರೂರ್ ತಂಡ
ನವದೆಹಲಿ: ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಉನ್ನತ ಹುದ್ದೆಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಶಶಿ ತರೂರ್ ನೇತೃತ್ವದ ಪಾಳಯವು ಉತ್ತರ ಪ್ರದೇಶದಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪಿಸಿದೆ. ಅಕ್ಟೋಬರ್ 19 ರಂದು, ಲೋಕಸಭಾ ಸಂಸದ ಶಶಿ ತರೂರ್ ಪರವಾಗಿ ಕಾಂಗ್ರೆಸ್ ನಾಯಕ ಸಲ್ಮಾನ್ ಸೋಜ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರಿಗೆ ಪತ್ರ ಬರೆದು ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ “ಅತ್ಯಂತ ಗಂಭೀರ ಅಕ್ರಮಗಳು” ನಡೆದಿವೆ ಎಂದು ಆರೋಪಿಸಿದ್ದಾರೆ. ಸೋಜ್ ತಮ್ಮ […]