ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಪಕ್ಕಾ: ಡಿಕೆ ಶಿವಕುಮಾರ್

ಬಳ್ಳಾರಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಯಾರ ಜೊತೆಗೂ ಮೈತ್ರಿ ಇಲ್ಲದೇ ಈ ಸಂಖ್ಯಾಬಲ ಸಾಧಿಸುತ್ತೇವೆ ಎಂದು ಅವರು ಹೇಳಿದ್ದಾರೆ. ರಾಜ್ಯ ವಿಧಾನಸಭೆಯು 224 ಸ್ಥಾನಗಳನ್ನು ಹೊಂದಿದ್ದು, ಬಹುಮತಕ್ಕೆ 150 ಸ್ಥಾನಗಳು ಬೇಕಾಗಿರುತ್ತದೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಭಾರತ್ ಜೋಡೋ ಯಾತ್ರೆಗೆ ಕರ್ನಾಟಕದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 150 ವಿಧಾನಸಭಾ […]