ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ: ಶ್ರೀ ಎಲ್ಲೂರು ಲಕ್ಷ್ಮೀನಾರಾಯಣರಾವ್ ಜ್ಯೋತಿಷ್ಯ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮೇ.19 ರವಿವಾರ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಜರಗಿತು. ಹತ್ತನೆಯ ಹನ್ನೊಂದನೆಯ ಹಾಗೂ ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಶ್ರೀ ಆದಿಶಂಕರಚಾರ್ಯರ ಸಂಕ್ಷಿಪ್ತ ಜೀವನ ಚರಿತ್ರೆ ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೆಳಗ್ಗೆ […]