ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳ: ಒಂದೇ ದಿನ 471 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹರಡುವಿಕೆ ತೀವ್ರಗತಿ ಪಡೆದುಕೊಂಡಿದ್ದು, ಇಂದು (ಏ.21) ರಂದು ಜಿಲ್ಲೆಯಲ್ಲಿ 471 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈವರೆಗೆ ಜಿಲ್ಲೆಯಲ್ಲಿ 1085 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, 194 ಮಂದಿ ಕೊರೊನಾ ಸೋಂಕಿನಿಂದ ಅಸುನೀಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.