ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ಸಬ್ಸಿಡಿ ಹೆಚ್ಚಳ

ನವದೆಹಲಿ: ವಿದ್ಯುತ್‌ ಚಾಲಿತ ವಾಹನಗಳ ತಯಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ 2ನೇ ಹಂತದ ಯೋಜನೆಯಲ್ಲಿ (ಫೇಮ್‌–2) ದ್ಚಿಚಕ್ರ ವಾಹನಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಶೇಕಡ 50ರಷ್ಟು ಹೆಚ್ಚಿಸಿದೆ. ಕೇಂದ್ರದ ನಿರ್ಧಾರದಿಂದ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ಬೆಲೆಯು ಪೆಟ್ರೋಲ್ ಎಂಜಿನ್‌ ವಾಹನಗಳ ಆಸುಪಾಸಿಗೆ ಇಳಿಕೆ ಆಗಲಿದೆ’ ಎಂದು ವಿದ್ಯುತ್‌ ಚಾಲಿತ ವಾಹನಗಳ ತಯಾರಕರ ಸಂಘದ (ಎಸ್‌ಎಂಇವಿ) ಪ್ರಧಾನ ನಿರ್ದೇಶಕ ಸೋಹಿಂದರ್‌ ಗಿಲ್‌ ಅಭಿಪ್ರಾಯಪಟ್ಟಿದ್ದಾರೆ. ನಗರ ಪ್ರದೇಶದಲ್ಲಿ ಬಳಸುವ ವಿದ್ಯುತ್ ಚಾಲಿತ ಸ್ಕೂಟರ್‌ ಬೆಲೆಯು ₹ 60 […]