ಆಡಳಿತದಲ್ಲಿ‌ ಭ್ರಷ್ಟಾಚಾರ, ಹಸ್ತಕ್ಷೇಪ ಹೆಚ್ಚಾಗಿದೆ: ಎಚ್.ವಿಶ್ವನಾಥ್

ಬೆಂಗಳೂರು: ಆಡಳಿತದಲ್ಲಿ ಬೇರೆಯವರ ಹಸ್ತಕ್ಷೇಪ, ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಇದರಿಂದ ಬಿಜೆಪಿ‌ ಸರ್ಕಾರದ ಮೇಲೆ ಸಾರ್ವಜನಿಕರ ಅಭಿಪ್ರಾಯ ಹೋಗಿದೆ ಎಂದು ನಾಮನಿರ್ದೇಶಿತ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್​ ಭೇಟಿ ಬಳಿಕ ಮಾತನಾಡಿದ ಅವರು, ಮೈತ್ರಿ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡಿ ಬಂದಿದ್ದೇವೆ. ಆದರೆ, ಕುಟುಂಬ ರಾಜಕಾರಣ, ರಾಕ್ಷಸ ರಾಜಕಾರಣ ಇಲ್ಲೂ ಕೂಡ ಕಾಣುತ್ತಿದ್ದೇವೆ. ನಾನು ಯಾವುದೇ ಬಣದಲ್ಲೂ ಇಲ್ಲ. ನಾನೊಬ್ಬ ಬಿಜೆಪಿ ಕಾರ್ಯಕರ್ತ. ಪಕ್ಷದ ಹಿತದೃಷ್ಟಿಯಿಂದ ಕೆಲವೊಂದು ಮಾತುಗಳನ್ನು ಹೇಳಿದ್ದೇನೆ […]