IND vs NZ ಮೊದಲ ಟಿ20; ಭಾರತಕ್ಕೆ ಐದು ವಿಕೆಟ್ ಗಳ ರೋಚಕ ಗೆಲುವು
ಜೈಪುರ: ನಾಯಕ ರೋಹಿತ್ ಶರ್ಮಾ (48) ಹಾಗೂ ಸೂರ್ಯಕುಮಾರ್ ಯಾದವ್ (62) ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಐದು ವಿಕೆಟ್ ಅಂತರದ ರೋಚಕ ಗೆಲುವು ಸಾಧಿಸಿತು. ಜೈಪುರದ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ನ್ಯೂಜಿಲೆಂಡ್ ತಂಡವು ಮಾರ್ಟಿನ್ ಗಪ್ಟಿಲ್ (70) ಹಾಗೂ ಮಾರ್ಕ್ ಚಾಪ್‌ಮನ್ (63) ಆಕರ್ಷಕ ಅರ್ಧಶತಕಗಳ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 164 […]