ಇನಾಯತ್ ಆರ್ಟ್ ಗ್ಯಾಲರಿ ವತಿಯಿಂದ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜನೆ
ಕುಂಜಿಬೆಟ್ಟು: ಇಲ್ಲಿನ ಇನಾಯತ್ ಆರ್ಟ್ ಗ್ಯಾಲರಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವು ಜರುಗಿತು. ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ಇನಾಯತ್ ಆರ್ಟ್ ಗ್ಯಾಲರಿ ವತಿಯಿಂದ ಮಕ್ಕಳಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕುರಿತು ಚಿತ್ರಕಲೆ ಸ್ಫರ್ಧೆ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್ ಟಿ ಸಿದ್ದಲಿಂಗಪ್ಪ ಕಲಾವಿದರ ಚಿತ್ರಕಲಾ ಪ್ರದರ್ಶನ ಕಂಡು ಮೆಚ್ಚುಗೆ ವ್ಯಕ್ತಪಡಿಸಿ ಚಿತ್ರಕಲೆ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ಆರ್ಟ್ ಗ್ಯಾಲರಿ ಸ್ಥಾಪಕ ಲಿಯಾಕತ್ ಅಲಿ, […]
ದೇಶಕ್ಕಾಗಿ ಹೋರಾಡಿದ ಸ್ಥಳೀಯ ನಾಯಕರನ್ನು ಗುರುತಿಸಿ ಗೌರವಿಸಿ: ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ
ಕಾರ್ಕಳ: ಸ್ವಾತಂತ್ರ್ಯ ಹೋರಾಟಕ್ಕೆ ದುಡಿದು ಮಡಿದ ಸ್ಥಳೀಯ ಮಹಾತ್ಮರನ್ನು ಸ್ಮರಿಸುವುದು ನಮ್ಮ ಆದ್ಯತೆಯಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಸೈನಿಕ ಸಂಘದ ಉಪಾಧ್ಯಕ್ಷ, ಭಾರತೀಯ ವಾಯು ಸೇನೆಯ ಮಾಜಿ ಸೈನಿಕ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ.ಬಿ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಗೈದು ಮಾತನಾಡಿದರು. ನಮ್ಮ ಸುತ್ತ ಮುತ್ತಲು ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಗುರುತಿಸಿ ಗೌರವಿಸುವ ಕಾರ್ಯವಾಗಬೇಕು. ಅನೇಕ ಮಹನೀಯರ ಸಾಹಸಗಳನ್ನು ಸಾದರ ಪಡಿಸುತ್ತಾ, ದೇಶದ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಹುಮ್ಮಸ್ಸನ್ನು […]
ದೊಡ್ಡಣ್ಣಗುಡ್ಡೆ ಪ್ರಜ್ಞಾಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಉಡುಪಿ: ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿಯವರ ಅಧ್ಯಕ್ಷತೆಯಲ್ಲಿ ಕ್ಷೇತ್ರದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಪ್ಪತ್ತೈದನೇ ಸ್ವಾತ್ಯಂತ್ರ ಮಹೋತ್ಸವವನ್ನು ಬಹು ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಜ್ಞಾ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ನ್ಯಾಯವಾದಿ ಯು. ಬಾಲ ಸುಬ್ರಹ್ಮಣ್ಯ ರಾವ್ ಅವರ ಅಧ್ಯಕ್ಷತೆ ವಹಿಸಿದ್ದರು. ಮಣೂರು ನಾರಾಯಣ ಖಾರ್ವಿ ಅವರು ಧ್ವಜಾರೋಹಣ ಮಾಡಿ, ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಯುವ ಪೀಳಿಗೆಗೆ ಸಂದರ್ಭೋಚಿತವಾದ ಸಲಹೆಯನ್ನು ನೀಡಿ […]
ಜನತಾ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಿತು. ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಶ್ರೀ.ವಿ.ವಿ.ವಿ ಮಂಡಳಿ ಅಧ್ಯಕ್ಷ ಕೆ.ಗೋಪಾಲ ಪೂಜಾರಿಯವರು ಧ್ವಜಾರೋಹಣಗೈದು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು ರಾಷ್ಟ್ರೀಯ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಮಾರಂಭದ ಮುಖ್ಯ ಅತಿಥಿಯಾಗಿ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ ಸ್ವಾತಂತ್ರ್ಯದ ಈ […]
ಹರ್ ಘರ್ ತಿರಂಗಾ ಅಭಿಯಾನ: ತ್ರಿವರ್ಣದ ಬೆಳಕಲ್ಲಿ ಕನಕ ಗೋಪುರ ಝಗಮಗ
ಉಡುಪಿ: ಇಲ್ಲಿನ ರಥಬೀದಿಯ ಕನಕ ಗೋಪುರ ತ್ರಿವರ್ಣಗಳಿಂದ ಝಗಮಗಿಸುತ್ತಿದೆ. ರಾಷ್ಟ್ರಧ್ವಜದ ಮೂರು ಬಣ್ಣಗಳಾದ ಕೇಸರಿ, ಬಿಳಿ ಮತ್ತು ಹಸಿರು ವರ್ಣದಲ್ಲಿ ಶೋಭಿಸುತ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪರ್ಯಾಯ ಕೃಷ್ಣಾಪುರ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ನೇತೃತ್ವದಲ್ಲಿ ಪಂಚಮಿ ಟ್ರಸ್ಟ್ ಮತ್ತು ಗಾಂಧಿ ಹಾಸ್ಪಿಟಲ್ ಸಹಯೋಗದೊಂದಿಗೆ ಕೃಷ್ಣ ಮಠದ ಕನಕ ಗೋಪುರ ತ್ರಿವರ್ಣದೊಂದಿಗೆ ಝಗಮಗಿಸುವಂತೆ ಮಾಡಲಾಗಿದ್ದು, ಶನಿವಾರದಿಂದ ಸೋಮವಾರ ವರೆಗೆ ಪ್ರತಿದಿನ ಸಂಜೆ 6.30ರಿಂದ ರಾತ್ರಿ 10ರ ವರೆಗೆ ವಿಶೇಷ […]