ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ‘ದೇಶದ ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು’ ಉಪನ್ಯಾಸ ಕಾರ್ಯಕ್ರಮ
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಜಾದಿ ಕಾ ಅಮೃತಮಹೋತ್ಸವದ ಅಂಗವಾಗಿ “ದೇಶದ ಸ್ವಾತಂತ್ರ್ಯ ಸಂಗ್ರಾಮ ಒಂದು ನೆನಪು” ಈ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಪ್ರಾಂಶುಪಾಲ ಗಣೇಶ ಮೊಗವೀರ್ ಮಾತನಾಡಿ, ವಿದ್ಯಾರ್ಥಿಗಳಿಗೆ ರಾಷ್ಟ್ರಭಕ್ತಿಯನ್ನು ಮೈಗೂಡಿಸಿಕೊಳ್ಳುತ್ತಾ ಸಾಧಕ ವಿದ್ಯಾರ್ಥಿಗಳಾಗಿ ದೇಶಕ್ಕೆ ಮಾದರಿ ಪ್ರಜೆಯಾಗುವಂತೆ ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸರ್ಕಾರಿ ಪ್ರೌಢಶಾಲೆ ಹೆಸ್ಕುತ್ತೂರಿನ ಮುಖ್ಯ ಶಿಕ್ಷಕ ಅಬ್ದುಲ್ ರವೂಫ್ ರವರು ದೇಶದ ಸ್ವಾತಂತ್ರ್ಯ ಸಂಗ್ರಾಮ […]