ಪ.ಬಂಗಾಳ, ಪಂಜಾಬ್ ನಲ್ಲಿ “ಕೈ” ಕಿರಿಕಿರಿ: ಏಕಾಂಗಿ ಸ್ಪರ್ಧೆಗೆ ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಒಲವು

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪ. ಬಂಗಾಳದ 42 ಲೋಕಸಭಾ ಸ್ಥಾನಗಳಿಗೆ ತನ್ನ ಸ್ವಂತ ಬಲದ ಮೇಲೆ ಚುನಾವಣೆಯನ್ನು ಎದುರಿಸಲಿದೆ ಮತ್ತು ಫಲಿತಾಂಶ ಪ್ರಕಟವಾದ ನಂತರವೇ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಪರಿಗಣಿಸಲಿದೆ ಎಂದು ಉಗ್ರ ಮಮತಾ ಬ್ಯಾನರ್ಜಿ ಬುಧವಾರ ಘೋಷಿಸಿದ್ದಾರೆ. “ನಾನು ಕಾಂಗ್ರೆಸ್ ಜೊತೆ ಯಾವುದೇ ಚರ್ಚೆ ನಡೆಸಿಲ್ಲ. ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಾನು ಅವರಿಗೆ (ಕಾಂಗ್ರೆಸ್‌ಗೆ) ಹಲವು ಪ್ರಸ್ತಾವನೆಗಳನ್ನು ನೀಡಿದ್ದೆ. ಆದರೆ ಅವರು ತಿರಸ್ಕರಿಸಿದರು. (ಉಳಿದ) ದೇಶದಲ್ಲಿ ಏನು ಮಾಡಲಾಗುವುದು […]