ಭಾರತೀಯ ಯೋಧರ ಶೌರ್ಯ, ಬಲಿದಾನ ವ್ಯರ್ಥವಾಗದು: ವಾಯುಪಡೆ ಮುಖ್ಯಸ್ಥ ಭದೌರಿಯಾ
ಹೈದರಾಬಾದ್: ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರು ತೋರಿದ ಧೈರ್ಯ, ಸಾಹಸ, ತ್ಯಾಗವನ್ನು ಎಂದಿಗೂ ವ್ಯರ್ಥ ಆಗಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ದೇಶದ ಜನತೆಗೆ ಭರವಸೆ ನೀಡುತ್ತೇನೆ ಎಂದು ಭಾರತೀಯ ವಾಯುಪಡೆಯ ಏರ್ ಚೀಫ್ ಮಾರ್ಷಲ್ ಆರ್.ಕೆ.ಎಸ್ ಭದೌರಿಯಾ ಹೇಳಿದ್ದಾರೆ. ಹೈದರಾಬಾದ್ ನ ವಾಯುಪಡೆ ಅಕಾಡೆಮಿಯಲ್ಲಿ ಶನಿವಾರ ನಡೆದ ಸಂಯೋಜಿತ ಪದವಿ ಪರೇಡ್ ನಲ್ಲಿ ಮಾತನಾಡಿದರು. ಯಾವುದೇ ಸನ್ನಿವೇಶವನ್ನು ಎದುರಿಸಲು ಭಾರತೀಯ ಸೇನೆ ಸರ್ವ ಸನ್ನದ್ಧವಾಗಿದೆ. ಶತ್ರು ದೇಶಗಳು ಗಡಿಯಲ್ಲಿ ನಡೆಸುವ ಚಟುವಟಿಕೆಗಳಿಗೆ ಸೂಕ್ತ ರೀತಿಯಲ್ಲಿ […]